ಮೂವರು ಪ್ರಾಣಾಪಾಯದಿಂದ ಪಾರು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಸಮೀಪದ ರಾಷ್ಟ್ರೀಯ ಹೆದ್ದಾರಿ 766ರ ಅರೇಪುರ ಗೇಟ್ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇರಳದ ಕೊಜಿಕೋಡ್‌ನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು. ಅರೇಪುರ ಗೇಟ್ ಸಮೀಪ ನಿದ್ರೆಯಿಂದ ಚಾಲಕ ದಿಢೀರ್ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೇಗೂರು ಪೊಲೀಸರು ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Font Awesome Icons

Leave a Reply

Your email address will not be published. Required fields are marked *