ಮೂವರು ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೀದರ್: ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದ ಬಳಿ  ಕ್ರೂಸರ್ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಪ್ರದೀಪ್ (25), ವಿನೋದ್ (26), ವರ್ದೀಶ್ (25) ಮೃತ ಪಟ್ಟ ದುರ್ದೈವಿಗಳು.

ಕ್ರೂಸರ್ ವಾಹನದಲ್ಲಿದ್ದ ಐವರ ಫೈಕಿ ಮೂವರು ‌ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರಣ ಕ್ರೂಸರ್ ವಾಹನ ವಿದ್ಯುತ್ ಕಂಬಕ್ಕೆ ಇಂದು ಬೆಳಗ್ಗೆ ಡಿಕ್ಕಿಯಾಗಿದೆ. ಮಾಹಿತಿ ತಿಳಿದು ಎಸ್‌ಪಿ ಚನ್ನಬಸವಣ್ಣ ಲಂಗೋಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇವರೆಲ್ಲ ಬೀದರ್ ತಾಲೂಕಿನ ಚಾಂಗಲೇರಾ ಯಾಕತಪುರ ಗ್ರಾಮದವರು ಎಂದು ಗುರುತಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *