ಮೂವರ ಸ್ಥಿತಿ ಗಂಭೀರ – ನ್ಯೂಸ್ ಕರ್ನಾಟಕ ಕನ್ನಡ (News Karnataka Kannada)

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ (ಸೆ.21) ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಹೊರನಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ತಿರುವಿನಲ್ಲಿ ದಟ್ಟ ಮಂಜಿನಿಂದ ರಸ್ತೆ ಕಾಣದೆ ನಿಯಂತ್ರಣ ಕಳೆದುಕೊಂಡು ಮೂವತ್ತು ಅಡಿ ಆಳದಲ್ಲಿದ್ದ ಪಂಚಾಯತ್ ಅಂಗಳಕ್ಕೆ ಬಿದ್ದಿದೆ.ಘಟನೆಯಲ್ಲಿ ಗಾಯಗೊಂಡವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದ್ದು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Font Awesome Icons

Leave a Reply

Your email address will not be published. Required fields are marked *