ಮೈಸೂರು: ನಗರದಲ್ಲಿ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದಾರೆ. ಸ್ವ ಕ್ಷೇತ್ರದಲ್ಲಿ ಟಿಕಾಣಿ ಹೂಡಿರುವ ಸಿದ್ದು ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರ ಗೆಲ್ಲುವುದಕ್ಕೆ ಭರ್ಜರಿ ಗೇಮ್ ಪ್ಲಾನ್ ರೆಡಿ ಮಾಡುತ್ತಿದ್ದಾರೆ. ಎರಡೂ ಲೋಕಸಭಾ ಕ್ಷೇತ್ರವನ್ನು ಗೆಲ್ಲಬೇಕೆಂದು ಪಣ ತೊಟ್ಟಿರುವ ಸಿದ್ದರಾಮಯ್ಯ ಅವರು ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ.
ಅದರಲ್ಲೂ ಮುಖ್ಯವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತರಿಗೆ ಗಾಳ ಹಾಕಿದ್ದಾರೆ. ಇದರ ಭಾಗವಾಗಿ ಮೈಸೂರು ಜಿಲ್ಲೆಯಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ. ಹೌದು..ಮಾಜಿ ಸಚಿವ ಕೋಟೆ ಶಿವಣ್ಣ ಬಿಜೆಪಿ ತೊರೆದು ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ.
ಕೋಟೆ ಶಿವಣ್ಣ ಅವರು ನಾಳೆ(ಮಾರ್ಚ್ 27) ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ ವಿಜಯಕುಮಾರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್ವಿ ರಾಜೀವ್ ಅವರು ಸಹ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.