ಮೋಹಕ ತಾರೆಯ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ರಿಲೀಸ್ ಡೇಟ್ ರಿವೀಲ್

ಬೆಂಗಳೂರು:  ಮೋಹಕ ತಾರೆ ನಟಿ ರಮ್ಯಾ ಅವರು ನಟನೆಗೆ ಕಂಬ್ಯಾಕ್ ಮಾಡಿದ್ದಾರೆ. ಇದರ ಜೊತೆಗೆ ಅವರು ಸಿನಿಮಾ ನಿರ್ಮಾಣದಲ್ಲೂ ತೊಡಗಿಕೊಂಡಿದ್ದಾರೆ.  ತಮ್ಮ ನಿರ್ಮಾಣ ಸಂಸ್ಥೆ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಶೂಟಿಂಗ್ ಮುಗಿದು ಬಹಳ ಸಮಯ ಕಳೆದಿದೆ. ಈಗ ಸಿನಿಮಾದ ರಿಲೀಸ್ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನವೆಂಬರ್ 24ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಈ ಚಿತ್ರದಲ್ಲಿ ರಾಜ್​ ಬಿ ಶೆಟ್ಟಿಗೆ ಜೊತೆಯಾಗಿ ಸಿರಿ ರವಿಕುಮಾರ್ ನಟಿಸಿದ್ದಾರೆ. ಸಿನಿಮಾ ರಿಲೀಸ್ ಬಗ್ಗೆ ಆ್ಯಪಲ್ ಬಾಕ್ಸ್ ಸೋಶಿಯಲ್ ಮೀಡಿಯಾ ತಾಣದಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. ರಾಜ್ ಬಿ ಶೆಟ್ಟಿ ಹಾಗೂ ಸಿರಿ ರವಿಕುಮಾರ್ ಒಟ್ಟಾಗಿ ಇರುವ ಪೋಸ್ಟರ್ ಹಂಚಿಕೊಳ್ಳಲಾಗಿದೆ.

ನವೆಂಬರ್ 24ರಂದು ಚಿತ್ರ ಬಿಡುಗಡೆ ಅಗಲಿದೆ ಎಂದು ತಂಡ ಮಾಹಿತಿ ನೀಡಿದೆ. ‘ಎಲ್ಲರಿಗೂ ವಿಜಯದಶಮಿ ಹಬ್ಬದ ಶುಭಾಶಯಗಳು. ನಮ್ಮ ಚಿತ್ರ ಸ್ವಾತಿ ಮುತ್ತಿನ ಮಳೆ ಹನಿಯೇ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ’ ಎಂದು ಕ್ಯಾಪ್ಶನ್ ನೀಡಲಾಗಿದೆ.

 

Font Awesome Icons

Leave a Reply

Your email address will not be published. Required fields are marked *