ಯಂತ್ರಗಳು ಡ್ಯಾಮೇಜ್‌ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಮಧ್ಯಪ್ರದೇಶ: ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಜಿಲ್ಲೆಯ ಗೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೂತ್​ ಸಂಖ್ಯೆ 275, 276,277,278,279 ಹಾಗು 280ಕ್ಕೆ ಸೇರಿದಂತೆ ನಾಲ್ಕು ಮತಗಟ್ಟೆಗಳ ಇವಿಎಂಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿತು. ಬಸ್​ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಘಟನೆಯಲ್ಲಿ ಯಾವುದೇ ಮತಗಟ್ಟೆ ಸಿಬ್ಬಂದಿ ಹಾಗೂ ಬಸ್​ ಚಾಲಕನಿಗೆ ಗಾಯಗಳಾಗಿಲ್ಲ ಎಂದು ಬೇತುಲ್ ಜಿಲ್ಲಾಧಿಕಾರಿ ನರೇಂದ್ರ ಸೂರ್ಯವಂಶಿ ತಿಳಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *