ಬೆಂಗಳೂರು: ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆ ಬೆನ್ನಲ್ಲೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗು ಕೇಳಿಬಂದಿದೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.
ಯಾರೇ ಘೋಷಣೆ ಕೂಗಿದ್ರೂ ಅವರು ದೇಶ ದ್ರೋಹಿಗಳೇ. ಈ ವಿಚಾರದಲ್ಲಿ ಎರಡು ಮಾತೇ ಇಲ್ಲ. ಬಿಜೆಪಿಯವರಿಗೆ ವಿಷಯಗಳೇ ಇಲ್ಲ. ಹಾಗಾಗಿ ಈ ವಿಚಾರದಲ್ಲಿ ಸಿಎಂ ಬಳಿ ರಾಜೀನಾಮೆ ಕೇಳುತ್ತಿದ್ದಾರೆ.
ನಿನ್ನೆ ಬೇರೆ ಬಿಜೆಪಿಗೆ ಮುಖಭಂಗವಾಗಿದೆ. ಹಾಗಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದಿದ್ದಾರೆ.
ಪಾಕಿಸ್ತಾನಕ್ಕೆ ಜೈಕಾರ ಹಾಕಿಲ್ಲ ಎಂದು ನಾಸೀರ್ ಹುಸೇನ್ ಹೇಳಿದ್ದಾರೆ. ನಾಸೀರ್ ಸಾಬ್ ಜಿಂದಾಬಾದ್ ಅಂತಾ ಘೋಷಣೆ ಕೂಗಿದ್ದಾರೆ ಎಂದಿದ್ದಾರೆ. ಎಫ್ಎಸ್ಎಲ್ ವರದಿಗೆ ವಿಡಿಯೋ ಕಳುಹಿಸಿದ್ದಾರೆ ಎಂದು ಜಮೀರ್ ಹೇಳಿದ್ದಾರೆ.