ರಂಗಭಾಸ್ಕರ ಪ್ರಶಸ್ತಿಗೆ ಚಲನಚಿತ್ರ, ಕಿರುತೆರೆ ನಟ ನವೀನ್ ಡಿ ಪಡೀಲ್ ಆಯ್ಕೆ

ಮಂಗಳೂರು: ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರೀ ಪ್ರತಿಭಾನ್ವಿತ ರಂಗನಟ ನವೀನ್ ಡಿ ಪಡೀಲ್ ಅವರಿಗೆ ಘೋಷಿಸಲಾಗಿದೆ ಎಂದು ರಂಗಸಂಗಾತಿಯ ಸಂಚಾಲಕ ಗೋಪಾಲಕೃಷ್ಣ ಶೆಟ್ಟಿ ಹೇಳಿದರು.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀ ಉಡುಪಿ ವಿಶ್ವನಾಥ ಶೆಣೈ ಪ್ರಾಯೋಜಿತ ರಂಗಕರ್ಮಿ ದಿವಂಗತ ಭಾಸ್ಕರ ನೆಲ್ಲಿತೀರ್ಥ ನೆನಪಲ್ಲಿ ನೀಡಲಾಗುವ ಪ್ರಶಸ್ತಿಯನ್ನು ಈ ಬಾರೀ ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ನೀಡಲಿದ್ದೇವೆ.

ಮೇ 3 ರಂದು ಮಂಗಳೂರಿನ ಕೆನರಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯುವ ಅದ್ದೂರಿ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ರಂಗಸಂಗಾತಿಯ ಬಳಗದಿಂದ “ನೆಮ್ಮದಿ ಅಪಾರ್ಟ್ಮೆಂಟ್ ಬ್ಲಾಕ್ ಬಿ” ಎಂಬ ನಾಟಕ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಕರುಣಾಕರ ಶೆಟ್ಟಿ, ಚಂದ್ರಶೇಖರ ಕೂಳೂರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Font Awesome Icons

Leave a Reply

Your email address will not be published. Required fields are marked *