ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಯೋಚಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ಮಾರ್ಚ್ 31ರ ವರೆಗೆ ಸಾರ್ವತ್ರಿಕ ರಜಾ ದಿನಗಳಾದ ಎರಡನೇ ಹಾಗೂ ನಾಲ್ಕನೇ ಶನಿವಾರ ಮತ್ತು ಭಾನುವಾರಗಳಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 5: 00ರ ವರೆಗೆ ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರಿನ ಕಚೇರಿಯನ್ನು ತೆರೆಯುವ ಮೂಲಕ 2023-24ನೇ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ.
ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ: ಪ್ರಾದೇಶಿಕ ನಿರ್ದೇಶಕರು, ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ರಾಜೀವ್ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816-2955580, 9844506629, 9886112434, 7349474339 ಅನ್ನು ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ ಆರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.