ರತನ್ ಟಾಟಾಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಮುಂಬೈ: ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯವನ್ನು ಸಲ್ಲಿಸಿದೆ. ವರ್ಲಿಯ ರುದ್ರಭೂಮಿಯ ವಿದ್ಯುತ್ ಚಿತಾಗಾರದಲ್ಲಿ ರತನ್‌ ಟಾಟಾ ಅವರ ಅಂತ್ಯಕ್ರಿಯೆ ನೆರವೇರಿದೆ.

ಟಾಟಾ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (ಎನ್‌ಸಿಪಿಎ) ಗುರುವಾರ ಬೆಳಗ್ಗೆ 10:30 ರಿಂದ ಸಂಜೆ 4 ರವರೆಗೆ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಂತರ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಯಿತು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಸಚಿವರು ಮತ್ತು ಅಂಬಾನಿಗಳಂತಹ ಉನ್ನತ ಉದ್ಯಮಿಗಳು ಕೂಡಾ ಸ್ಥಳದಲ್ಲಿ ಉಪಸ್ಥಿತರಿದ್ದರು. ರತನ್‌ ಟಾಟಾ ಅಗಲಿಕೆಗೆ ಶೋಕಾಚರಣೆಯ ಸಂಕೇತವಾಗಿ ಮಹಾರಾಷ್ಟ್ರದ ಸರ್ಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗಿದೆ. ಹಾಗೆಯೇ ಮನರಂಜನಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ.

Font Awesome Icons

Leave a Reply

Your email address will not be published. Required fields are marked *