ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವಿಡಿಯೋ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಡೀಪ್ ಫೇಕ್ ವಿಡಿಯೋ ಮಾಡಿದ ಬಿಹಾರ ಮೂಲದ 19 ವರ್ಷದ ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಈತನ ಮಾಹಿತಿಯನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಯುವಕನನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗುತ್ತಿದೆ. ರಶ್ಮಿಕಾ ಅವರ ಡೀಪ್ ಫೇಕ್ ವೀಡಿಯೊವನ್ನು ಮೊದಲು ಈತನ ಖಾತೆಯಿಂದ ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ ಎಂದು ತನಿಖೆ ವೇಳೆ ಕಂಡು ಬಂದಿದೆ.
ಅದರ ನಂತರ, ವೀಡಿಯೊವನ್ನು ಅನೇಕ ಜನರು ಹಂಚಿಕೊಂಡಿದ್ದಾರೆ.ಈ ವಿಡಿಯೋವನ್ನು ಬೇರೊಂದು ಸಾಮಾಜಿಕ ಜಾಲತಾಣದಿಂದ ಡೌನ್‌ಲೋಡ್ ಮಾಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವುದಾಗಿ ಯುವಕ ಒಪ್ಪಿಕೊಂಡಿದ್ದಾನೆ. ಆದರೆ, ಈ ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಿಲ್ಲ, ತನಿಖೆಯಷ್ಟೇ ನಡೆಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.