ರಶ್ಮಿಕಾ ಮಂದಣ್ಣ ಡೀಪ್‌ಫೇಕ್ ವಿಡಿಯೋ ಪ್ರಕರಣ; ಎಫ್‌ಐಆರ್‌ ದಾಖಲು

ನವದೆಹಲಿ: ಕೊಡಗಿನ ಬೆಡಗಿ, ನಟಿ, ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೋ ಈ ಹಿಂದೆ ವೈರಲ್‌ ಆಗಿದ್ದು ಭಾರಿ ಸುದ್ದಿಯಾಗಿತ್ತು. ಈ ಕುರಿತು ಹಿರಿಯ ನಟ ಅಮಿತಾಭ್‌ ಬಚ್ಚನ್‌ ಸೇರಿದಂತೆ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಶುಕ್ರವಾರ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆಯನ್ನು ನಡೆಸಲಾಗುತ್ತಿದೆ.

ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅಡಿಯಲ್ಲಿ ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತು ಈ ಸಂಬಂಧ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ದೆಹಲಿ ಮಹಿಳಾ ಆಯೋಗ ಕೋರಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

Font Awesome Icons

Leave a Reply

Your email address will not be published. Required fields are marked *