ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬನಾದ ಶಾಂತನ್ ಇಂದು(ಫೆ.28) ಬೆಳಗ್ಗೆ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶಾಂತನ್ ಯಕೃತ್ ಸಮಸ್ಯೆಯಿಂದ ಬಳಲುತ್ತಿದ್ದರು, ರಾಜೀವ್ ಗಾಂಧಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಬಿಡುಗಡೆಯಾದ ಬಳಿಕ ಅವರನ್ನು ತಿರುಚ್ಚಿಯ ಕೇಂದ್ರ ಕಾರಾಗೃಹದ ವಿಶೇಷ ಶಿಬಿರದಲ್ಲಿ ಇರಿಸಲಾಗಿತ್ತು.