ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ: ಹವಮಾನ ಇಲಾಖೆ ಮುನ್ಸೂಚನೆ.   » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಏಪ್ರಿಲ್,18,2024 (www.justkannada.in): ರಾಜ್ಯದಲ್ಲಿ ಕಳೆದ ಮುಂಗಾರು ಕೈಕೊಟ್ಟಿದ್ದಕ್ಕೆ ಬರದ ಪರಿಸ್ಥಿತಿ ಆವರಿಸಿದ್ದು ಈ ನಡುಗೆ ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಮೈಸೂರು, ಮಂಡ್ಯ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Key words: Rain – next -three days – state-Meteorological department

Font Awesome Icons

Leave a Reply

Your email address will not be published. Required fields are marked *