ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನದಲ್ಲಿ ಸಾಧಾರಣವಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಪ್ರದೇಶದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರು ಸುತ್ತಮುತ್ತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ಬೀಸಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

Font Awesome Icons

Leave a Reply

Your email address will not be published. Required fields are marked *