ಬೆಂಗಳೂರು : ವಿಧಾನಮಂಡಲ ಅಧಿವೇಶನ ಫೆ.12 ರಿಂದ ಆರಂಭವಾಗಲಿದೆ. ಫೆ.16 ರಂದು ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ವಿಧಾನಮಂಡಲಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿಯನ್ನು ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.