ನಂಜನಗೂಡು: ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ನಂಜನಗೂಡು ತಾಲೂಕಿನ ವಳಗೆರೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಹರ್ಷವರ್ಧನ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗಡಿ ಭೈರೇಶ್ವರ ದೇವಾಲಯದ ಮುಂಭಾಗದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. 30 ವರ್ಷಗಳ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ.
ಶ್ರೀ ಬಾಲ ರಾಮನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶಾದ್ಯಂತ ಎಲ್ಲಾ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಿ ಎಂದು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದೇವೆ ಎಂದು ಮಾಜಿ ಶಾಸಕ ಹರ್ಷವರ್ಧನ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ, ಬಿಜೆಪಿ ಮಂಡಲ ಅಧ್ಯಕ್ಷ ಮಹೇಶ್, ಬಿಜೆಪಿ ಮುಖಂಡರಾದ ಪುಟ್ಟಸ್ವಾಮಿ, ಮಹೇಶ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗರಾಮ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ರವಿ, ಗೋವಿಂದರಾಜು , ನಾಗರಾಜು, ಕಾಂತರಾಜು ಸೇರಿದಂತೆ ಹಲವರು ಭಾಗವಹಿಸಿದರು.