ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಪ್ರಕರಣ ದಾಖಲಿಸಿಕೊಂಡ ಎನ್‌ಐಎ

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಆದ ಬಾಂಬ್ ಸ್ಫೋಟ ಘಟನೆ ಸಂಬಂಧ ಎನ್‌ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ‌ ಕೈಗೆತ್ತಿಕೊಳ್ಳಲಿದ್ದಾರೆ.

UAPA ಅಡಿ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದ್ರೆ ಪ್ರಕರಣದ ಗಂಭೀರತೆ ಅರಿತು ಎನ್​​ಐಎ ಪ್ರಕರಣ ದಾಖಲಿಸಿಕೊಂಡಿದೆ.

ಬಾಂಬ್ ಸ್ಫೋಟ ಸಂಭವಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆಗೆ ಭಾನುವಾರ ಭೇಟಿ ನೀಡಿದ ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸಿಸಿಬಿ ತನಿಖಾಧಿಕಾರಿ ನವೀನ್ ಕುಲಕರ್ಣಿ ಮತ್ತು ಟೀಂ, ರಾಮೇಶ್ವರಂ ಕೆಫೆ ಮ್ಯಾನೇಜರ್‌, ಸಿಬ್ಬಂದಿ ಸಮ್ಮುಖದಲ್ಲಿ ಮಹಜರು ನಡೆಸಿದ್ರು. ಬಾಂಬರ್‌ ಎಂಟ್ರಿಯಾದ ಸ್ಥಳ, ಓಡಾಡಿದ್ದ ಸ್ಥಳದಲ್ಲಿ ಪರಿಶೀಲನೆ ಮಾಡಿದ್ದಾರೆ. ಜೊತೆಗೆ ಶಂಕಿತರನ್ನ ಆಡುಗೋಡಿ ಟೆಕ್ನಿಕಲ್ ಸೆಲ್​ಗೆ ಕರೆತಂದು ವಿಚಾರಣೆ ಕೂಡ ನಡೆಸಿದ್ದಾರೆ.

ಇನ್ನು ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಾರ್ಚ್ 1 ರಂದು ಪೂರ್ವ ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ ಹತ್ತು ಜನರು ಗಾಯಗೊಂಡಿದ್ದರು. ಟೋಪಿ, ಮುಖವಾಡ ಮತ್ತು ಕನ್ನಡಕ ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಇನ್ನೂ ಪತ್ತೆಯಾಗಿಲ್ಲ .

 

 

Font Awesome Icons

Leave a Reply

Your email address will not be published. Required fields are marked *