ರೇಣುಕಾಸ್ವಾಮಿ ಕೊಲೆ ಕೇಸ್: ಯಾರ ಮುಲಾಜಿಲ್ಲದೆ ವರದಿ ಬಂದ ಬಳಿಕ ಕಾನೂನು ಕ್ರಮ- ಗೃಹ ಸಚಿವ ಡಾ ಜಿ.ಪರಮೇಶ್ವರ್. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್





ಬೆಂಗಳೂರು,ಜೂನ್ ,17,2024 (www.justkannada.in):  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಬಂದ ಬಳಿಕ ಯಾರ ಮುಲಾಜಿಲ್ಲದೇ, ಯಾರ ಒತ್ತಡಕ್ಕೆ ಮಣಿಯದೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಾಗಲೇ ಸಮರ್ಥ  ಅಧಿಕಾರಿಗಳ ನೇಮಕ ಆಗಿದೆ . ಸಿಎಂ ಮತ್ತು ನಾವು ಹೇಳಿದ್ದೇವೆ. ವರದಿ ಬಂದ ಬಳಿಕ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.  ಯಾರನ್ನೂ ರಕ್ಷಿಸಲ್ಲ ಯಾರ ಒತ್ತಡಕ್ಕೂ ಮಣಿಯಲ್ಲ. ಯಾರ ಮುಲಾಜು ಇಲ್ಲದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Key words: Renukaswamy, murder, case, Minister, Parameshwar






Previous articleಕೇಂದ್ರ ಸಚಿವ ವಿ ಸೋಮಣ್ಣ ಪುತ್ರ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್.!


Font Awesome Icons

Leave a Reply

Your email address will not be published. Required fields are marked *