ಲಾರಿ ಬೈಕ್‌ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತ್ಯು

ಬಳ್ಳಾರಿ: ಲಾರಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಅಲ್ಲಿಪುರ ಗ್ರಾಮದ ವಿನಾಯಕ ನಗರ ಬಳಿ ನಡೆದಿದೆ.

ಸಾವನ್ನಪ್ಪಿದ ಬೈಕ್​​ ಸವಾರನನ್ನು ಹೊನ್ನೂರಪ್ಪ(37) ಎಂದು ಗುರುತಿಸಲಾಗಿದೆ. ಈತ ಕಂಪ್ಲಿ ತಾಲೂಕಿನ ಮುದ್ದಾಪುರ ಗ್ರಾಮದ ನಿವಾಸಿಯಾಗಿದ್ದಾನೆ. ಅಪಘಾತದಲ್ಲಿ ಬೈಕ್ ಸವಾರ ಹೊನ್ನೂರಪ್ಪ ಲಾರಿ ಹರಿದು ಅಪ್ಪಚಿಯಾಗಿದ್ದಾನೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಘಟನಾ ಸ್ಥಳಕ್ಕೆ ಟ್ರಾಫಿಕ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *