ವಿದೇಶದಲ್ಲಿರುವ ಪ್ರಜ್ವಲ್​ನನ್ನು ಕರೆತರಲು ಸಿದ್ದರಾಮಯ್ಯಗೆ ಮಾರ್ಗಸೂಚಿ ನೀಡಿದ ಅಣ್ಣಾಮಲೈ

ಬೆಂಗಳೂರು: ಪ್ರಜ್ವಲ್​ ರೇವಣ್ಣ ವಿದೇಶದಲ್ಲಿರುವುದರಿಂದ ಅವರನ್ನು ಬಂಧಿಸಿ ಕರೆತರಲು ಕೇಂದ್ರ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶ ಮಾಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಮಾಜಿ ಐಪಿಎಸ್​ ಅಧಿಕಾರಿ, ತಮಿಳನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾರ್ಯವಿಧಾನದ ಪ್ರಕಾರ, ಎಸ್​ಐಟಿ ಅಥವಾ ಸಿಐಡಿ ಸಿಬಿಐಗೆ ನೋಡಲ್​ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತದೆ.

ವಿದೇಶಕ್ಕೆ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಲು ರೆಡ್​ ಕಾರ್ನರ್​ ನೋಟಿಸ್ ಜಾರಿಗೊಳಿಸಲು ಅಥವಾ ಇಂಟರ್​ಪೋಲ್​ ನೆರವು ಪಡೆಯಲು ರಾಜ್ಯ ಸರ್ಕಾರ ಸಿಬಿಐ ನಿರ್ದೇಶಕರಿಗೆ ಪತ್ರ ಬರೆಯಬೇಕು.

ಬಳಿಕ ರೆಡ್​​ ಕಾರ್ನರ್​ ಜಾರಿಗೊಳಿಸಲಾಗುತ್ತದೆ. ಆಗ ಆರೋಪಿ ಯಾವುದೇ ವಿಮಾನ ನಿಲ್ದಾಣಕ್ಕೆ ಬಂದರೆ ಕೂಡಲೇ ಅವನನ್ನು ಅಲ್ಲಿನ ಪೊಲೀಸರು ಬಂಧಿಸುತ್ತಾರೆ. ಬಳಿಕ ಆರೋಪಿ ಬೇಕಾಗಿರುವ ಠಾಣೆಗೆ ಮಾಹಿತಿ ನೀಡುತ್ತಾರೆ.

ನಾನು ಕರ್ನಾಟಕದ ಸೇವೆ ಸಲ್ಲಿಸುತ್ತಿರುವಾಗ ಭೂಗತ ಪಾತಕಿ ಬನ್ನಂಜೆ ರಾಜನನ್ನು ಮೊರಾಕೊದಿಂದ ಪ್ರಧಾನಿಗೆ ಯಾವುದೇ ಪತ್ರ ಬರೆಯದೆ ಬಂಧಿಸಿ ಕರೆತಂದೆವು ಎಂದು ತಿಳಿಸಿದರು.

ಈ ವಿಚಾರದಲ್ಲಿ ಏನು ಹೇಳಬೇಕು ಎಂಬುದನ್ನು ನಮ್ಮ ನಾಯಕರು ಈಗಾಗಲೇ ಹೇಳಿದ್ದಾರೆ. ನಾವು ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಅಥವಾ ಯಾವುದೇ ಅಡೆತಡೆಗಳನ್ನು ಹಾಕುತ್ತಿಲ್ಲ. ಈ ಪ್ರಕರಣದಲ್ಲಿ ಯಾವುದೇ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಸ್ವತಂತ್ರವಾಗಿದೆ ಎಂದು ಹೇಳಿದರು.

Font Awesome Icons

Leave a Reply

Your email address will not be published. Required fields are marked *