ಕಲಬುರಗಿ: ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛ ಮಾಡಿಸಿದ್ದಲ್ಲದೆ, ಪ್ರಾಂಶುಪಾಲರ ಮನೆಗೆಲಸವನ್ನೂ ಮಾಡಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಕಲಬುರಗಿಯ ಮಾಲಗತ್ತಿ ರಸ್ತೆಯಲ್ಲಿರುವ ಮೌಲಾನಾ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯ ಹಾಗೂ ಪ್ರಾಂಶುಪಾಲ ಜೋಹರ ಜಬೀನ ಅವರ ವಿರುದ್ಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಒಂದು ವರ್ಷದಿಂದ ಪ್ರಾಂಶುಪಾಲರು ಮಕ್ಕಳನ್ನು ಮನೆಗೆಲಸಕ್ಕೆ ಕರೆದುಕೊಂಡು ಹೋಗಿದ್ದಾರೆ. ಕೆಲಸ ಮಾಡದಿದ್ದರೆ ಗದರುವುದು, ಹೊಡೆಯುವುದು ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಜೋಹರ ಜಬೀನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಕಲಬುರಗಿಯ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.