ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಶಾಂತಿಯುತವಾಗಿ ನಡೆಯುವಂತೆ
ಸಿದ್ದತೆ ನಡೆಸಲಾಗಿದೆ.

ಪರೀಕ್ಷಾ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ನೆರವೇರಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್‌ ಸಂಚಾರ ಸೇವೆಯು ಉಚಿತವಾಗಿ ಸಿಗಲಿದೆ.

ರಾಜ್ಯಾದ್ಯಂತ 301 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಂಡಳಿಯು ನಾಳೆಯಿಂದ ಪ್ರಾರಂಭವಾಗಿ ಮೇ 16ರವರೆಗೂ ಈ ಪರೀಕ್ಷೆ ನಡೆಸಲಿದೆ. ದ್ವಿತೀಯ ಪಿಯುಸಿ ಮೊದಲ ವಾರ್ಷಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಎರಡನೇ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಅನುತ್ತೀರ್ಣರಾದ ಕೆಲ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Font Awesome Icons

Leave a Reply

Your email address will not be published. Required fields are marked *