ವಿದ್ಯಾರ್ಥಿಗಳು ಕೆರಿಯರ್ ಬಗ್ಗೆ ಗಮನಹರಿಸಬೇಕು :  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್. » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


 

ಮೈಸೂರು, ಜು,11,2024: (www.justkannada.in news) ‘‘ಇಂದು ಜಗತ್ತು ನಾಗಾಲೋಟದಲ್ಲಿ ಓಡುತ್ತಿದೆ. ಎಲ್ಲಾ ರಂಗಗಳಲ್ಲೂ ಸ್ಪರ್ಧೆ ಹೆಚ್ಚಾಗಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಕೆರಿಯರ್ ಬಗ್ಗೆ ಹೆಚ್ಚು ಗಮನಹರಿಸಬೇಕುʼ ಎಂದು ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಕಿವಿಮಾತು ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರಾಮುವಿವಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘‘ಇಂದು ಜಗತ್ತು ನಾಗಾಲೋಟದಲ್ಲಿ ಓಡುತ್ತಿದೆ. ಎಲ್ಲಾ ರಂಗಗಳಲ್ಲೂ ಸ್ಪರ್ಧೆ ಹೆಚ್ಚಾಗಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಕೆರಿಯರ್ ಬಗ್ಗೆ ಹೆಚ್ಚು ಗಮನಹರಿಸಬೇಕು. ನಿಮ್ಮ ಗುರಿಯೆಡೆಗೆ ಸ್ಪಷ್ಟತೆ ಇರಬೇಕು. ತರಬೇತಿಗಳು ವ್ಯಕ್ತಿತ್ವ ವಿಕಸನವನ್ನು ವೃದ್ಧಿಗೊಳಿಸುತ್ತವೆ. ಅವಕಾಶಗಳನ್ನು ಬೆನ್ನತ್ತಿ ಹೋಗಬೇಕು. ಇಂದು ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆಯುತ್ತಿರುವುದು ಖುಷಿಯ ವಿಚಾರ,’’ ಎಂದು ತಿಳಿಸಿದರು.

ಪ್ರತಿಯೊಬ್ಬ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗೂ ತನ್ನ ಗುರಿಯೆಡೆಗೆ ಸ್ಪಷ್ಟತೆ ಇರಬೇಕು. ಅಲ್ಲದೆ, ವ್ಯಕ್ತಿತ್ವ ವಿಕಸನ ವೃದ್ಧಿಸಲು ಸಾಮಾನ್ಯ ಜ್ಞಾನ ತುಂಬಾ ಮುಖ್ಯ ಎಂಬುದನ್ನು ಅರಿತಿರಬೇಕು ಎಂದರು.

ಮನುಷ್ಯ ಮೌಲ್ಯಗಳನ್ನು ಮರೆಯಬಾರದು. ನಾನು ಐಎಎಸ್ ಪರೀಕ್ಷೆ ಬರೆಯುವ ಸಮಯಕ್ಕೂ ಇಂದಿಗೂ ಬಹಳಷ್ಟು ವ್ಯತ್ಯಾಸ ಇದೆ. ಇಂದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಅಧ್ಯಯನ ನಡೆಸಲು ಸಾಕಷ್ಟು ಪಠ್ಯಪುಸ್ತಕ ಹಾಗೂ ಮಾರ್ಗದರ್ಶನಗಳು ಸಿಗುತ್ತಿದೆ. ಆದರೆ, ಕಾಲೇಜು ಹಾಗೂ ವಿವಿಯಲ್ಲಿ ಕಲಿತದ್ದು ಐಎಎಸ್‌ನಲ್ಲಿ ಬಳಕೆ ಆಗುವುದಿಲ್ಲ ಎಂಬುದು ನೆನಪಿರಲಿ. ನಿಮ್ಮ ಜ್ಞಾನವನ್ನು ಒರೆ ಹಚ್ಚಬೇಕು,’’ ಎಂದು ಕಿವಿಮಾತು ಹೇಳಿದರು.

‘ಇಂದು ಕಲಿಕಾ ಬೋಧನಾದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಗ್ರಂಥಾಲಯದಲ್ಲಿ ಹೆಚ್ಚು ಪುಸ್ತಕಗಳು ಸಿಗುತ್ತಿವೆ. ಅಲ್ಲಿ ಹೆಚ್ಚು ಸಮಯ ಕಳೆಯಿರಿ. ಯಾವುದನ್ನು ಎಷ್ಟು ಓದಬೇಕೆಂಬ ಯೋಜನಾ ಪಟ್ಟಿ ತಯಾರಿಸಿಕೊಳ್ಳಿಘಿ. ಐಎಎಸ್ ನಲ್ಲಿ ಕೆಲವರಿಗೆ ಯಶಸ್ಸು ಸಿಗುತ್ತದೆ ಮತ್ತೆ ಕೆಲವರಿಗೆ ಸಿಗುವುದಿಲ್ಲ. ಆಗ ಪ್ಲ್ಯಾನ್ ಬಿ ಕೂಡ ಇರಬೇಕು,’’ ಎಂದು ತಿಳಿಸಿದರು.

ಇದೇ ವೇಳೆ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗಾಗಿ ‘ಮುಕ್ತ ಭಂಡಾರ’ ಪುಸ್ತಕ ಬಿಡುಗಡೆ ಮಾಡಲಾಯಿತು. ಐಎಸ್ ಎ್ ಅಧಿಕಾರಿ ಮನೋಜ್ ರಾಜನ್, ಕರಾಮುವಿವಿ ಕುಲಪತಿ ಪ್ರೊ.ಶರಣಪ್ಪ ವಿ. ಹಲಸೆ, ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ, ಡೀನ್ ಪ್ರೊ.ಎನ್. ಲಕ್ಷ್ಮಿ, ಪರೀಕ್ಷಾಂಗ ಕುಲಸಚಿವ ಡಾ.ಎಚ್.ವಿಶ್ವನಾಥ್, ಐಪಿಎಸ್ ಅಧಿಕಾರಿ ಗೀತಾ ಪ್ರಸನ್ನ, ಡಾ.ರಾಮನಾಥ ನಾಯ್ಡು, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಸೇರಿದಂತೆ ಇತರರು ಇದ್ದರು.

key words:  Students, should focus on, career, Additional Chief Secretary, Dr. Shalini Rajneesh. KSOU

 

SUMMARY:

“Today, the world is running at a rapid pace. Competition has increased on all fronts. Therefore, students should focus more on their careers,” said Additional Chief Secretary to the state government, Dr. K. Sudhakar. Shalini Rajneesh.

She was speaking at the valedictory function of the KAS and other competitive exams training camp organized by the Karnataka State Open University Competitive Examination Training Centre at Kaveri Auditorium, University here on Thursday.

Font Awesome Icons

Leave a Reply

Your email address will not be published. Required fields are marked *