ವಿಧಾನ ಮಂಡಲ ಅಧಿವೇಶನ: ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ. – Just Kannada | Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್




ಬೆಂಗಳೂರು, ಫೆಬ್ರವರಿ,28,2024(www.justkannada.in): ಪಾಕ್ ಪರ ಘೋಷಣೆ ಆರೋಪ ವಿಚಾರ ಇಂದು ಸದನದಲ್ಲಿ ಪ್ರಸ್ತಾವಾಗಿ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ನಡೆಯಿತು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ  ಮಾಡಲಾಗಿದೆ.

ನಿನ್ನೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನ ನಾಸಿರ್‌ ಹುಸೇನ್‌ ಗೆಲುವು ಸಾಧಿಸಿದ ಮೇಲೆ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು. ಇದನ್ನು ಖಂಡಿಸಿ ಇಂದು ವಿಧಾನಸಭೆ ಕಲಾಪದಲ್ಲಿ ಸದನದ ಬಾವಿಯಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿತ್ತು. ಸರ್ಕಾರದ ವಿರುದ್ದ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನಲೆಯಲ್ಲಿ  ಕಲಾಪವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ವಿಧಾನ ಮಂಡಲ ಅಧಿವೇಶನ ಇಂದಿಗೆ ಮುಕ್ತಾಯವಾಗಬೇಕಿತ್ತು.

Key words:  session- Assembly -session -extended






Previous articleಇಂದು ಡೆಡ್‌ ಲೈನ್: ಮೈಸೂರಿನ ಅಂಗಡಿ ಮಳಿಗೆಗಳಲ್ಲಿ ರಾರಾಜಿಸುತ್ತಿವೆ ಕನ್ನಡ ನಾಮಫಲಕ


Font Awesome Icons

Leave a Reply

Your email address will not be published. Required fields are marked *