ವಿಮಾನ ಕಾರ್ಯಾಚರಣೆ ಸ್ಥಗಿತ, ಒಮಾನ್​ನಲ್ಲಿ 18 ಮಂದಿ ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ದುಬೈ : ದುಬೈ ನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ.

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ಹಲವು ವಿಮಾನಗಳು ರದ್ದಾಗಿದ್ದು, ಹಲವು ವಿಮಾನಗಳು ವಿಳಂಬಗೊಂಡಿವೆ.

ಭಾರೀ ಮಳೆಯಿಂದಾಗಿ, ಯುಎಇ ಆಡಳಿತವು ಮಂಗಳವಾರ ಜನರನ್ನು ತಮ್ಮ ಮನೆಗಳಲ್ಲಿ ಇರುವಂತೆ ವಿನಂತಿಸಿದೆ. ಶಾಲೆಗಳು ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸುತ್ತಿದ್ದವು. ಸರ್ಕಾರಿ ನೌಕರರಿಗೂ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡವು ಮತ್ತು ದುಬೈನಾದ್ಯಂತ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.

ರಾಷ್ಟ್ರೀಯ ಹವಾಮಾನ ಕೇಂದ್ರವು ದುಬೈ, ಅಬುಧಾಬಿ, ಶಾರ್ಜಾ ಮತ್ತು ಇತರ ಕೆಲವು ಎಮಿರೇಟ್‌ಗಳ ನಿವಾಸಿಗಳಿಗೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಯುಎಇಯ ನೆರೆಯ ದೇಶಗಳಾದ ಬಹ್ರೇನ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲೂ ಭಾರೀ ಮಳೆಯಾಗಿದೆ.

ಏತನ್ಮಧ್ಯೆ, ನೆರೆಯ ಒಮಾನ್ ನಲ್ಲಿ ಪ್ರತ್ಯೇಕ ಭಾರಿ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 18 ಕ್ಕೆ ಏರಿದೆ, 10 ಶಾಲಾ ಮಕ್ಕಳ ವಾಹನ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಬಹ್ರೇನ್‌ನ ರಾಜಧಾನಿ ಮನಾಮದಲ್ಲಿ ಬೀದಿಗಳು ಜಲಾವೃತಗೊಂಡಿವೆ. ಬುಧವಾರ ಕುವೈತ್, ಸೌದಿ ಅರೇಬಿಯಾ ಮತ್ತು ಒಮಾನ್‌ನಲ್ಲಿ ಚಂಡಮಾರುತದ ಸಾಧ್ಯತೆ ಇದೆ.

Font Awesome Icons

Leave a Reply

Your email address will not be published. Required fields are marked *