ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶದಲ್ಲಿ ವಿಡಿಯೋ ಮಾಡಿದ ಯೂಟ್ಯೂಬರ್ ಬಂಧನ

ಬೆಂಗಳೂರು:  ಕನ್ನಡದ ಯೂಟ್ಯೂಬರ್ ಓರ್ವ  ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ತೆರಳಿ ವಿಡಿಯೋ ಮಾಡಿಅರೆಸ್ಟ್ ಆದ ಘಟನೆ ನಡೆದಿದೆ.

ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ ನನ್ನು ಪೊಲೀಸರು ​ಬಂಧಿಸಿದ್ದಾರೆ.

ಯಲಹಂಕ ಮೂಲಕ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್.

ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು.

ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದಾರೆ.

ಇನ್ನು ಪೊಲೀಸರ ವಿಚಾರಣೆ ವೇಳೆ  ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ.

ಸದ್ಯ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Font Awesome Icons

Leave a Reply

Your email address will not be published. Required fields are marked *