ಮೆಲ್ಬೋರ್ನ್: ಭಾರತದ ರೋಹನ್ ಬೋಪಣ್ಣ ಅವರು ತಮ್ಮ ಜೊತೆಗಾರ ಮ್ಯಾಥ್ಯೂ ಎಬ್ಡೆನ್ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ನ ಸೆಮಿಫೈನಲ್ ತಲುಪಿದ ನಂತರ ಪುರುಷರ ಡಬಲ್ಸ್ನಲ್ಲಿ ವಿಶ್ವ ನಂ.1 ಶ್ರೇಯಾಂಕವನ್ನು ಸಾಧಿಸಿದ ಅತ್ಯಂತ ಹಿರಿಯ ಟೆನಿಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಅವರೊಂದಿಗೆ ಜೊತೆಗೂಡಿ ಆರನೆ ಕ್ರಮಾಂಕದ ಅರ್ಜೆಂಟೀನಾ ಜೋಡಿಗಳಾದ ಮ್ಯಾಕ್ಸಿಮೊ ಗೋನ್ಝಾಲೆಝ್ ಹಾಗೂ ಆ್ಯಂಡ್ರೆಸ್ ಮೊಲ್ಟೇನಿ ಅವರನ್ನು ಸುಲಭವಾಗಿ ಪರಾಭವಗೊಳಿಸುವ ಮೂಲಕ 43 ವರ್ಷದ ರೋಹನ್ ಬೋಪಣ್ಣ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಕ್ರೀಡಾಕೂಟದ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮೆಲ್ಬೋರ್ನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ನ ಪುರುಷರ ಡಬಲ್ಸ್ನಲ್ಲಿ ಭಾರತದ ರೋಹನ್ ಬೋಪಣ್ಣ ಹಾಗೂ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್ ಜೋಡಿ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ. ಈ ಗೆಲುವಿನೊಂದಿಗೆ ATP ಡಬಲ್ಸ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ವಿಶ್ವದ ಅತ್ಯಂತ ಹಿರಿಯ ಆಟಗಾರ ಎಂಬ ದಾಖಲೆ ಬೋಪಣ್ಣ ಪಾಲಾಗಿದೆ.
ಮೂಲತಃ ಕೊಡಗಿನವರಾದ ರೋಹನ್ ಬೋಪಣ್ಣ ತಮ್ಮ 43ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ.