ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಮಹದೇವಮ್ಮ ಹಾಗು ದೇವಮ್ಮ ಎಂಬುವವರಿಗೆ ಸೇರಿದ ತಲಾ ಐದು ಸೇರಿದಂತೆ ಒಟ್ಟು 10 ಕುರಿಗಳು ಸಾವನ್ನಪ್ಪಿದೆ. ಮಾಲೀಕರು ಎಂದಿನಂತೆ ಮಲ್ಲಯ್ಯನಪುರ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. ಆದರೆ ವಿಷಕಾರಿ ಸೊಪ್ಪು ತಿಂದ 10 ಕುರಿಗಳು ಜಮೀನೊಂದರಲ್ಲಿ ಸಾವನ್ನಪ್ಪಿದೆ. ಇನ್ನು ಮೂರು ಕುರಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಶು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಒತ್ತಾಯ: ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು. ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಹಾಗು ಶಿವಣ್ಣ ಒತ್ತಾಯಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *