ಬೆಂಗಳೂರು: ಮಹಿಳೆಯರ ಪ್ರೀಮಿಯರ್ ಲೀಗ್‌ನ ನಾಲ್ಕನೇ ಪಂದ್ಯ ಯುಪಿ ವಾರಿಯರ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಎರಡೂ ತಂಡಗಳು ಹಿಂದಿನ ಪಂದ್ಯದಲ್ಲಿ ಸೋಲು ಕಂಡಿವೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುಂಬೈ ಇಂಡಿಯನ್ಸ್ ಸೋಲಿಸಿದರೆ, ಯುಪಿ ವಾರಿಯರ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿತ್ತು. ಹೀಗಾಗಿ ಉಭಯ ತಂಡಗಳು ಮೊದಲ ಗೆಲುವಿಗಾಗಿ ಹಾತೊರೆಯುತ್ತಿವೆ. ಏಕೆಂದರೆ ಈ ಪಂದ್ಯದ ಸೋಲು ಲೀಗ್ನಲ್ಲಿ ತಂಡದ ಮುಂದಿನ ಪಯಣಕ್ಕೆ ಹಿನ್ನಡೆಯನ್ನುಂಟು ಮಾಡಲಿದೆ. ಹೀಗಾಗಿ ಎರಡೂ ತಂಡಗಳಿಗೂ ಗೆಲುವಿನ ಅನಿವಾರ್ಯತೆ ಎದುರಾಗಿದೆ.
ಏತನ್ಮಧ್ಯೆ, ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಯುಪಿ ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ/ವಿಕೆಟ್ ಕೀಪರ್), ವೃಂದಾ ದಿನೇಶ್, ತಹ್ಲಿಯಾ ಮೆಗ್ರಾತ್, ಗ್ರೇಸ್ ಹ್ಯಾರಿಸ್, ಶ್ವೇತಾ ಸೆಹ್ರಾವತ್, ಕಿರಣ್ ನವಗಿರೆ, ಪೂನಂ ಖೇಮ್ನಾರ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ರಾಜೇಶ್ವರಿ ಗಾಯಕ್ವಾಡ್, ಗೌಹರ್ ಸುಲ್ತಾನಾ.
ಡೆಲ್ಲಿ ಕ್ಯಾಪಿಟಲ್ಸ್: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ ಕೆಪ್, ಅನ್ನಾಬೆಲ್ಲೆ ಸದರ್ಲ್ಯಾಂಡ್, ಅರುಂಧತಿ ರೆಡ್ಡಿ, ಮಿನ್ನು ಮಣಿ, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ರಾಧಾ ಯಾದವ್, ಶಿಖಾ ಪಾಂಡೆ.