ವೇಗವಾಗಿ ಬಂದ ಕಾರು ಕಂಟೈನರ್​ಗೆ ಡಿಕ್ಕಿ: 9 ಜನರ ದುರ್ಮರಣ

ಬಿಹಾರ: ಬಿಹಾರದ ಕೈಮುರು ಜಿಲ್ಲೆಯ ದೇವ್ಕಲಿಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ವೇಗವಾಗಿ ಬಂದ ಕಾರು ಕಂಟೈನರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿ​ನಲ್ಲಿದ್ದ 9 ಮಂದಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಮೊಹಾನಿಯಾದಿಂದ ಉತ್ತರಪ್ರದೇಶದಿಂದ ತೆರಳುತ್ತಿದ್ದ ಸ್ಕಾರ್ಪಿಯೋ ಕಾರೊಂದು ಎದುರಿಗೆ ಬರುತ್ತಿದ್ದ ಬೈಕ್ ಸವಾರನನ್ನು ಉಳಿಸಲು ಯತ್ನಿಸುತ್ತಿದ್ದಾಗ ಬ್ಯಾಲೆನ್ಸ್ ಕಳೆದುಕೊಂಡು ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದು, ಮೃತದೇಹಗಳನ್ನು ಬಿಹಾರದ ಬಬುವಾ ಸದರ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತ ಬೆನ್ನಲ್ಲೇ, ಟ್ರಕ್ ಡ್ರೈವರ್ ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *