ವ್ಯಕ್ತಿ ಮೃತ್ಯು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಕೋಲಾರ: ರಾತ್ರಿ ಸುರಿದ ಭಾರೀ ಮಳೆಗೆ ಚಲಿಸುತ್ತಿದ್ದ ಬೈಕ್​ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟ ಘಟನೆ ಕೋಲಾರ ಗಡಿಯ ದೆಂಕಣಿಕೋಟೆ ಅಂತೇವನಪಲ್ಲಿ ಗ್ರಾಮದಲ್ಲಿ ಬಳಿ ನಡೆದಿದೆ.

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿದ್ದ ಮರವೊಂದು ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದಿದೆ. ಇದರಿಂದ ಬೈಕ್​ನಲ್ಲಿದ್ದ ಇಬ್ಬರ ಪೈಕಿ ಸವಾರ ಸಾವನ್ನಪ್ಪಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವನ್ನು ತೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಘಟನೆಯು ಕೋಲಾರದ- ತಮಿಳುನಾಡಿನ ಗಡಿ ಭಾಗದಲ್ಲಿ ನಡೆದಿದೆ.

Font Awesome Icons

Leave a Reply

Your email address will not be published. Required fields are marked *