ಉತ್ತರ ಪ್ರದೇಶ: ಉತ್ತರ ಪ್ರದೇಶದ ಶಹಜಹಾನ್ಪುರದಲ್ಲಿ ಟೆಂಪೋ-ಡಂಪರ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ವೇಗವಾಗಿ ಬಂದ ಡಂಪರ್ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ದಟ್ಟವಾದ ಮಂಜಿನಿಂದ ಉಂಟಾದ ಕಡಿಮೆ ಗೋಚರತೆಯು ಅಪಘಾತಕ್ಕೆ ಕಾರಣವಾಗಿದೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಗಾಯಾಳುಗಳ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಬೇಕು ಮತ್ತು ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.