ಬೆಂಗಳೂರು: ಪ್ರಿಯಾ-ಮನು ಕಥೆ ಹೇಳಿ ಗೆದ್ದಿದ್ದ ನಿರ್ದೇಶಕ ಹೇಮಂತ್ ರಾವ್ ಇದೀಗ ಶಿವರಾಜ್ಕುಮಾರ್ ಜೊತೆ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗ ಚಿತ್ರತಂಡ ಕಡೆಯಿಂದ ಅಧಿಕೃತ ಅಪ್ಡೇಟ್ ಸಿಕ್ಕಿದೆ.
‘ಗೋಧಿಬಣ್ಣ ಸಾಧಾರಣ ಮೈಕಟ್ಟು’, ಕವಲುದಾರಿ ನಿರ್ದೇಶಕ ಹೇಮಂತ್ ರಾವ್ ಅವರು ತಮ್ಮ ಮುಂದಿನ ಚಿತ್ರಕ್ಕೆ ಶಿವಣ್ಣನಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ಹೇಮಂತ್ ರಾವ್ ಅವರು ಶಿವಣ್ಣ ಮತ್ತು ಈ ಚಿತ್ರದ ನಿರ್ಮಾಪಕ ವೈಶಾಖ್ ಜೆ ಗೌಡ ಜೊತೆ ಕ್ಯಾಮೆರಾಗೆ ಪೋಸ್ ನೀಡಿರುವ ಫೋಟೋ ಶೇರ್ ಮಾಡಿ ಸಿನಿಮಾ ಬಗ್ಗೆ ಅಧಿಕೃತ ಅಪ್ಡೇಟ್ ನೀಡಿದ್ದಾರೆ.
‘ಜೈಲರ್’ ಸಕ್ಸಸ್ ನಂತರ ಶಿವಣ್ಣ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಭೈರತಿ ರಣಗಲ್, ಕರಟಕ ಧಮನಕ, ಘೋಸ್ಟ್ 2, ರಾಮ್ ಚರಣ್ ಜೊತೆಗಿನ ಹೊಸ ಸಿನಿಮಾದಲ್ಲಿ ಶಿವಣ್ಣ ನಟಿಸುತ್ತಿದ್ದಾರೆ.
ಶಿವಣ್ಣ ಜೊತೆ ಸಿನಿಮಾ ಮಾಡುವ ಬಗ್ಗೆ ಹೇಮಂತ್ ರಾವ್ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.