ವಿಜಯಪುರ : ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಅಸಾಂವಿಧಾನಿಕ ಎಂದು ಈಗಾಗಲೇ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಇದಕ್ಕೆ ಮೋದಿ ಅವರು ಮೊದಲು ರಾಜೀನಾಮೆ ನೀಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ.
ಸಿಎಂ ವಿರುದ್ಧದ ಮುಡಾ ಪ್ರಕರಣ ಸಂಬಂಧ ನ್ಯಾಯಾಲಯ ತನಿಖೆಗೆ ಹಸಿರು ನಿಶಾನೆ ನೀಡಿದ ಬೆನ್ನಲ್ಲೇ ಪ್ರಧಾನಿ ಮೋದಿ ಸೇರಿದಂತರ ರಾಜ್ಯದ ಪ್ರತಿಪಕ್ಷದ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ.
ಈ ಬಗ್ಗೆ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಬಿಜೆಪಿಯ ಎಲ್ಲರೂ ಜಾಮೀನಿನ ಮೇಲಿದ್ದಾರೆ. ಈಗಾಗಲೇ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ ಅವರಿಗೆ ಈ ಬಗ್ಗೆ ಗೊತ್ತಿಲ್ಲವಾ ಎಂದು ಪಾಟೀಲರು ಪ್ರಶ್ನಿಸಿದ್ದಾರೆ.
ಮುಡಾ ಪ್ರಕರಣದಲ್ಲಿ ಇನ್ನೂ ಪ್ರಾಥಮಿಕ ತನಿಖೆಯೂ ಆಗಿಲ್ಲ. ಹೀಗಿರುವಾಗ ಸಿದ್ದರಾಮಯ್ಯನವರ ರಾಜೀನಾಮೆ ಕೇಳುವವರು ಮೊದಲು ರಾಜೀನಾಮೆ ನೀಡಲಿ ಎಂದು ಸಿಎಂ ಪರ ಮಾತನಾಡಿದ್ದಾರೆ.