ಬಾಲಿವುಡ್ ನಟಿ ಅದಿತಿ ರಾವ್ ಹೈದರಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಖ್ಯಾತ ನಟ ಸಿದ್ದಾರ್ಥ್ ಜೊತೆ ಅವರ ಮದುವೆ ನೆರವೇರಿದೆ. ಕಳೆದ ಕೆಲವು ವರ್ಷಗಳಿಂದ ಸಿದ್ದಾರ್ಥ್ ಮತ್ತು ಅದಿತಿ ರಾವ್ ಹೈದರಿ ಅವರು ರಿಲೇಷನ್ಶಿಪ್ನಲ್ಲಿ ಇದ್ದರು. ಈಗ ದಾಂಪತ್ಯ ಜೀವನಕ್ಕೆ ಪ್ರವೇಶ ಪಡೆದಿದ್ದಾರೆ.
ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ. ಅದಿತಿ ರಾವ್ ಹೈದರಿ ಮತ್ತು ಸಿದ್ದಾರ್ಥ್ ಅವರ ಮದುವೆ ವಿಷಯ ತಿಳಿದು ಅಭಿಮಾನಿಗಳು, ಸೆಲೆಬ್ರಿಟಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ.
ದಕ್ಷಿಣ ಭಾರತದ ಶೈಲಿಯಲ್ಲಿ ಅದಿತಿ ರಾವ್ ಹೈದರಿ ಹಾಗೂ ಸಿದ್ದಾರ್ಥ್ ಮದುವೆ ನಡೆದಿದೆ. ‘ನೀನೇ ನನ್ನ ಚಂದ್ರ, ನೀನೇ ನನ್ನ ಸೂರ್ಯ, ನೀನೇ ನನ್ನ ನಕ್ಷತ್ರ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅದಿತಿ ರಾವ್ ಹೈದರಿ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಮದುವೆಯಲ್ಲಿ ಕುಟುಂಬದವರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿ ಆಗಿದ್ದರು.
ಇನ್ನು ಈ ಜೋಡಿ ತಮ್ಮ ಪ್ರೀತಿಯ ವಿಷಯವನ್ನು ಅವರಿಬ್ಬರು ಮುಚ್ಚಿಟ್ಟಿರಲಿಲ್ಲ. ಇನ್ಸ್ಟಾಗ್ರಾಮ್ನಲ್ಲಿ ತಮ್ಮಿಬ್ಬರ ಫೋಟೋಗಳನ್ನು ಅವರು ಆಗಾಗ ಶೇರ್ ಮಾಡಿಕೊಳ್ಳುತ್ತಿದ್ದರು. 2024ರ ಆರಂಭದಲ್ಲಿ ಅವರಿಬ್ಬರು ಎಂಗೇಜ್ಮೆಂಟ್ ಮಾಡಿಕೊಂಡಿದ್ದರು. ಈಗ ಸದ್ದಿಲ್ಲದೇ ಮದುವೆ ಆಗಿದ್ದಾರೆ.