ಸರ್ಕಾರಿ ಒಟಿಟಿ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಸರ್ಕಾರಿ ಪ್ರಾಯೋಜಿತ ಒಟಿಟಿ ವೇದಿಕೆ ‘ಸಿಸ್ಪೇಸ್‌’ ಅನ್ನು ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ. ಇದು ದೇಶದಲ್ಲೇ ಮೊದಲ ಬಾರಿಗೆ ಆರಂಭವಾದ ಸರಕಾರಿ ಒಟಿಟಿ ಆಗಿದೆ.

ಉದ್ಘಾಟನೆ ಮಾಡಿ ಮಾತನಾಡಿದ ವಿಜಯನ್‌ ಈ ‘ಒಟಿಟಿ ವೇದಿಕೆ ಮಲಯಾಳಂ ಭಾಷೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಸಲುವಾಗಿ ಸರ್ಕಾರದ ವತಿಯಿಂದಲೇ ಅನಾವರಣ ಮಾಡಲಾಗಿದೆ’ ಎಂದು ಹೇಳಿದರು.

ಈ ಸಿಸ್ಪೇಸ್‌ ಒಟಿಟಿ ವೇದಿಕೆಯಲ್ಲಿ ಕೇವಲ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಮತ್ತು ಪ್ರಶಸ್ತಿ ವಿಜೇತ ಚಿತ್ರಗಳನ್ನು ಮಾತ್ರ ಖರೀದಿಸಲಾಗುತ್ತದೆ. ಇದಕ್ಕಾಗಿ 60 ಮಂದಿಯ ಆಯ್ಕೆ ಸಮಿತಿಯನ್ನು ಸರ್ಕಾರ ರಚಿಸಿದ್ದು, ಕಥೆಯ ತಿರುಳನ್ನು ಆಧರಿಸಿ ಚಿತ್ರಗಳನ್ನು ಆರಿಸಲಾಗುತ್ತದೆ. ಇದಕ್ಕಾಗಿ ಗ್ರಾಹಕರಿಂದ ಚಲನಚಿತ್ರ ವೀಕ್ಷಣೆಗೆ ₹75 ವಂತಿಗೆ ನಿಗದಿಪಡಿಸಲಾಗಿದೆ. ಮೊದಲ ಹಂತದಲ್ಲಿ 42 ಚಿತ್ರಗಳನ್ನು ಆಯ್ಕೆ ಮಾಡಲಾಗಿದ್ದು, ಪ್ಲೇಸ್ಟೋರ್‌ನಿಂದ ಸಿಸ್ಪೇಸ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಸೂಕ್ತ ವಂತಿಗೆ ಪಾವತಿಸಿ ಚಿತ್ರ ವೀಕ್ಷಣೆ ಮಾಡಬಹುದಾಗಿದೆ.

Font Awesome Icons

Leave a Reply

Your email address will not be published. Required fields are marked *