ಮುಂಬೈ: ಗರ್ಭಕಂಠ ಕ್ಯಾನ್ಸರ್ ಕುರಿತಂತೆ ಸಾವಿನ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆಗೆ ಮಾನನಷ್ಟ ಸಂಕಷ್ಟ ಎದುರಾಗಿದೆ.
ಫೈಜರ್ ಅನ್ಸಾರಿ ಎನ್ನುವವರು ಕಾನ್ಪುರ ಪೊಲೀಸ್ ಕಮಿಷ್ನರ್ ಗೆ ದೂರು ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ, ಅಲಿ ಕಾಶಿಪ್ ಅನ್ನೋ ವಕೀಲರು ದೂರು ನೀಡಿ ಪೂನಂ ಮತ್ತು ಆಕೆಯ ಮ್ಯಾನೇಜರ್ ಮೇಲೆ ಎಫ್.ಐ.ಆರ್ ದಾಖಲಾಗಿತ್ತು.
ಈಕೆ ಮಾಡಿದ ನಾಟಕದಿಂದಾಗಿ ಬಾಲಿವುಡ್ ನಟ ನಟಿಯರ, ಮಾಡೆಲ್ ಗಳನ್ನು ಅನುಮಾನದಿಂದ ನೋಡುವಂತಾಗಿದೆ ಎಂದು ಫೈಜರ್ ಅನ್ಸಾರಿ ದೂರಿದ್ದಾರೆ.
ಈ ಪ್ರಕರಣದ ಕುರಿತಂತೆ ಪೂನಂ ಮೇಲೆ ಸಾಕಷ್ಟು ಆರೋಪಗಳು ಕೇಳಿ ಬಂದಿವೆ. ಔಷಧಿ ಕಂಪನಿಗಳು ಈಕೆಗೆ ಹಣ ನೀಡಿ, ಈ ರೀತಿ ನಾಟಕವಾಡುವಂತೆ ಮಾಡಿವೆ ಎನ್ನುವ ಆರೋಪವಿತ್ತು.
ಈ ಕುರಿತಂತೆ ಸ್ವತಃ ಪೂನಂ ಸ್ಪಷ್ಟನೆ ನೀಡಿದ್ದಾರೆ. ತಾವು ಸತ್ತಿರುವುದಾಗಿ ಹೇಳಿಕೊಂಡಿದ್ದರ ಹಿಂದೆ ನಿಜವಾದ ಕಾಳಜಿ ಇತ್ತು. ಯಾವುದೇ ಔಷಧಿ ಕಂಪನಿಗಳು ತಮಗೆ ಹಣ ನೀಡಿಲ್ಲ ಎಂದು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ.