ಬೆಂಗಳೂರು,ಸೆಪ್ಟಂಬರ್,24,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಈ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸ್ನೇಹಮಯಿ ಕೃಷ್ಣ ಅವರು, ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ದ ಎಂದಿದೆ. ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿದ್ದಾರೆ. ಈ ಮೂಲಕ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಅಭಿಪ್ರಾಯ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಾದ ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು ಅರ್ಜಿ ವಜಾಗೊಳಿಸಿದೆ. ಇದೀಗ ಸಿಎಂ ಸಿದ್ದರಾಮಯ್ಯ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.
Key words: CM, application, dismissed, Snehamai Krishna