ಮೈಸೂರು : ಶೀಘ್ರವೇ ಪೊಲೀಸ್ ಕಾನ್ಸ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ಮೈಸೂರಿನ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಸದ್ಯದಲ್ಲೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚನೆ ನೀಡಲಾಗಿದೆ. ಕನ್ನಡ ಪ್ರಶ್ನೆಪತ್ರಿಕೆಯ ಅನುವಾದದಲ್ಲಿ ಸಾಕಷ್ಟು ದೋಷಗಳಿದ್ದ ಕಾರಣಕ್ಕೆ ಮರುಪರೀಕ್ಷೆ ಮಾಡಗುತ್ತದೆ.
ಇನ್ನು ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ತಿಳಿಸಿದ್ದಾಗಿ ಹೇಳಿದರು.