ಸಿಡಿಲು ಬಡಿದು ವ್ಯಕ್ತಿ ಸಾವು – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಬೀದರ್‌:  ಜಿಲ್ಲೆಯಲ್ಲಿ ಸೋಮವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸುನೀಲ ತಂದೆ ವಿಜಯಕುಮಾರ್‌ (32) ಮೃತರು. ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ಜರುಗಿದ್ದು, ಸ್ಥಳಕ್ಕೆ ಧನ್ನೂರ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Font Awesome Icons

Leave a Reply

Your email address will not be published. Required fields are marked *