ಸಿ.ಎಂ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಹಾಸನ : ನಾವು, ಮೋದಿಯವರಂತೆ ಭಾರತೀಯರನ್ನು ನಂಬಿಸಿ ದ್ರೋಹ ಬಗೆಯಲ್ಲ. ನಂಬಿಕೆ ದ್ರೋಹ ಮಾಡಲ್ಲ. ನುಡಿದಂತೆ ನಡೆದು ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೇಯಸ್ ಎಂ ಪಟೇಲ್ ಪರವಾಗಿ ನಡೆದ ಬೃಹತ್ ಪ್ರಜಾಧ್ವನಿ-೨ ಯಾತ್ರೆಯನ್ನು ಉದ್ಘಾ ಟಿಸಿ ಮಾತನಾಡಿದ ಅವರು, ನಾವು ಕೇವಲ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ಬಕ್ರಾ ಮಾಡುವುದಿಲ್ಲ. ನಿಮ್ಮ ಬದುಕಿನ ಸಂಕಷ್ಟಗಳ ಜತೆಗೆ ನಿಲ್ಲುತ್ತೇವೆ . ರಾಜ್ಯಕ್ಕೆ ಬಿಜೆಪಿ ಮಾಡುತ್ತಿರುವ ಅನ್ಯಾಯದ ಬಗ್ಗೆ ಪ್ರಜ್ವಲ್ ರೇವಣ್ಣ, ದೇವೇಗೌಡರು ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿಲ್ಲ ಏಕೆ ಎಂದು ಸಿ.ಎಂ ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ೫೩೦೦ ಕೋಟಿ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿದರು. ಆದರೆ ಇದು ವರೆಗೂ ಒಂದೇ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದೆ ವಂಚಿಸಿದ್ದಾರೆ. ಈ ವಂಚನೆಯನ್ನು ಪ್ರಶ್ನಿಸುವುದನ್ನು ಬಿಟ್ಟ ಜೆಡಿಎಸ್ ನವರು ಹೋಗಿ ಬಿಜೆಪಿ ಜತೆಗೇ ಜಮೆಯಾಗಿದ್ದಾರೆ. ಇದು ಪ್ರಜ್ವಲ್ ರೇವಣ್ಣ ಅವರು ತಮಗೆ ಮತ ಹಾಕಿದವರಿಗೆ ಮಾಡಿದ ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.
ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೆ ಕೆಲಸ ಮಾಡುವುದು ಯಶಸ್ಸು. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಬಂದಿದ್ದಕ್ಕೆ ಎರಡು ಕೋಟಿ ಕುಟುಂಬಗಳಿಗೆ ನೇರವಾಗಿ ಒಂದಲ್ಲ ಒಂದು ರೀತಿ ಸಹಾಯ ನೀಡುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಹಿಂದೆ ಬಿಜೆಪಿ ಸರ್ಕಾರ ರಾಷ್ಟ್ರದಲ್ಲಿ ಅಧಿಕಾರದಲ್ಲಿತ್ತು. ರಾಜ್ಯದಲ್ಲಿ ೨೫ಮಂದಿ ಬಿಜೆಪಿ ಸಂಸದರು ಗೆದ್ದಿದ್ದು, ಅವರೊಂದಿಗಿನ ಹೊಂದಾಣಿಕೆಯಿಂದ ಸುಮಲತಾ ಜಯ ಸಾಧಿಸಿದರು ಎಂದ ಡಿಕೆಶಿ, ರಾಹುಲ್‌ ಗಾಂಧಿ ಹಾಸನಕ್ಕೆ ಬಂದು ಜೆಡಿಎಸ್ ಬಿಜೆಪಿಯ ಬಿ ಟೀಂ ಅಂದಿದ್ದರು. ಈಗ ಬಿಜೆಪಿ ಜೊತೆ ಪಾರ್ಟ್‌ನರ್ ಆಗಿದ್ದಾರೆ. ಪಾರ್ಟ್‌ನರ್‌ಗಳಿಗೆ ಕೆಳಲು ಬಯಸುತ್ತೇನೆ, ಬಿಜೆಪಿಯವರು ಕೊಟ್ಟ ಮಾತು ಏನಾಯ್ತು? ಕಪ್ಪು ಹಣ ತಂದು ಹದಿನೈದು ಲಕ್ಷ ಹಾಕ್ತಿನಿ ಅಂದಿದ್ದರು ಜನರಿಗೆ ಕೊಟ್ಟಿದ್ದಾರಾ ಎಂದು ಪ್ರಶ್ನಿಸಿದರು.

ತಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದ ಡಿಸಿಎಂ, ರೈತರಿಗಾಗಿ ನೀರಾವರಿ ಯೋಜನೆ, ಎತ್ತಿನಹೊಳೆ ಯೋಜನೆ ಬಗ್ಗೆ ಟೀಕೆ ಮಾಡಿದ್ದಾರೆ. ಜೆಡಿಎಸ್‌ನವರು ಅವರ ಅಧಿಕಾರ ಅವಧಿಯಲ್ಲಿ ಎಷ್ಟು ಕೋಟಿ ಹಣ ಕೊಟ್ಟರು ಹೇಳಬೇಕಾಗಿದೆ.
ನಾವು ಚುನಾವಣೆ ಮುಗಿದ ಮೇಲೆ ಎತ್ತಿನಹೊಳೆ ಮೊದಲ ಹಂತದಲ್ಲಿ ನೀರು ಹರಿಯುತ್ತದೆ. ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಮಾಡದ್ದನ್ನು ಸಿದ್ದರಾಮಯ್ಯ ಅವರು ಮಾಡುತ್ತಾರೆ ಎಂದರು.

ʼವರ್ಷಕ್ಕೆ ೨ ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿಯವರನ್ನು ನೀವೂ ನಂಬಿದಿರಿ. ಭಾರತೀಯರೆಲ್ಲರೂ ನಂಬಿದರು. ಆದರೆ, ಉದ್ಯೋಗ ಕೊಡಿ ಅಂದಾಗ, ಹೋಗಿ ಪಕೋಡ ಮಾರಾಟ ಮಾಡಿ ಅಂದ್ರು. ಇದು ವಿದ್ಯಾವಂತ ಯುವಕ/ ಯುವತಿಯರಿಗೆ ಮೋದಿ ಮಾಡಿದ ನಂಬಿಕೆ ದ್ರೋಹ ಅಲ್ಲವೇ? ಭಾರತೀಯರಿಗೆ ಮಾಡಿದ ವಂಚನೆ ಅಲ್ಲವೇʼ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದ ಮೋದಿ ಸರ್ಕಾರ ಪ್ರತಿಭಟನಾನಿರತ ರೈತರ ಮೇಲೆ ದೌರ್ಜನ್ಯ ನಡೆಸಿದ್ದು ಮಹಾದ್ರೋಹ ಅಲ್ಲವೇ. ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿದ ರೈತರ ಮೇಲೆ ಬಿಜೆಪಿ ನಡೆಸಿದ ದೌರ್ಜನ್ಯ ಒಂದಾ ಎರಡಾ? ಈಗ ಆ ದೌರ್ಜನ್ಯಗಳಿಗೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ.
ಮೋದಿ ಅವರ ದರ್ಬಾರ್ ನಲ್ಲಿ ಆದ ಬೆಲೆ ಏರಿಕೆಯಿಂದ ಬಸವಳಿದಿದ್ದ ರಾಜ್ಯದ ಜನತೆಯ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ನಾವು ಐದು ಗ್ಯಾರಂಟಿಗಳನ್ನು ರೂಪಿಸಿದೆವು. ಜಾರಿ ಮಾಡಿದೆವು. ನಾನು ನುಡಿದಂತೆ ನಡೆದಂತೆ ನಡೆದಿದ್ದೇವೆ. ಮೋದಿಯವರಂತೆ ಭಾರತೀಯರನ್ನು ನಾವು ನಂಬಿಸಿ ದ್ರೋಹ ಬಗೆಯಲ್ಲ ಎಂದರು.

ಕಾಂಗ್ರೆಸ್ ರಾಜ್ಯಾಧ್ಯಕ್ಷ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ ಮೈತ್ರಿ ಅಭ್ಯರ್ಥಿ ಜೆಡಿಎಸ್ ನವರಿಗೆ ಯಾರು ಕಾರ್ಯಕರ್ತರು ಸಿಗಲಿಲ್ವಾ? ಗೌಡರ ಮಗ, ಮೊಮ್ಮಗ, ಅಳಿಯ ಇನ್ನೂ ಬೇರೆ ಯಾರು ಸಿಗಲಿಲ್ವಾ? ಎಷ್ಟು ದಿನ ಅವರಿಗೆ ಬೆಂಬಲ ಕೊಡುತ್ತಿರಾ ಎಂದು ಮತದಾರರು ಪ್ರಶ್ನಿಸಿದರು.

ಈ ವೇಳೆ ಬಿ.ಶಿವರಾಂ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ,ಶಾಸಕ ಕೆ.ಎಂ ಶಿವ ಲಿಂಗೇಗೌಡ, ರಾಜ್ಯ ಸಭೆಮಾಜಿ ಸದಸ್ಯ ಎಚ್.ಕೆ ಜವರೇಗೌಡ, ಮಾಜಿ ಸಚಿವ ಸೋಮಶೇಖರ್, ರಾಜಶೇಖರ, ಕೃಷ್ಣೇಗೌಡ ಇದ್ದರು.

Font Awesome Icons

Leave a Reply

Your email address will not be published. Required fields are marked *