ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಕೇಂದ್ರ ಸಚಿವ ಹೆಚ್.ಡಿಕೆ ಆಕ್ರೋಶ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಸೆಪ್ಟಂಬರ್,16,2024 (www.justkannada.in): ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸರ್ಕಾರವನ್ನ ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೆಚ್.ಡಿ ಕುಮಾರಸ್ವಾಮಿ, ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.

ಅಧಿಕಾರಕ್ಕೇ ಬಂದಾಗಿಂದಲು ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್.ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!! ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ  ಎಂದು ಕಿಡಿಕಾರಿದರು.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ತಾಕೀತು ಮಾಡಿದರು.

Key words: Democracy, state Congress government, campaign, HDK

Font Awesome Icons

Leave a Reply

Your email address will not be published. Required fields are marked *