ಹಾಗಲಕಾಯಿ ಬಾಯಿಗೆ ಕಹಿಯಾದರು ಆರೋಗ್ಯಕ್ಕೆ ಸಿಹಿ

ಹಾಗಲಕಾಯಿ ಮೊಮೊರ್ಡಿಕಾ ಚರಾಂತಿಯ, ಇಂಗ್ಲಿಷ್ ನಲ್ಲಿ ಬಿಟರ್ ಮೆಲನ್ ಅಥವಾ ಬಿಟರ್ ಗಾರ್ಡ್ ಎಂದು ಕರೆಯಲಾಗುತ್ತದೆ. ಇದನ್ನು ಏಷಿಯಾ, ಆಫ್ರಿಕಾ, ಹಾಗೂ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣುಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದು ಆರೋಗ್ಯದಲ್ಲಿ ತನ್ನ ಕಹಿಯ ಸ್ವಭಾವದಿಂದಲೇ ಅದ್ಬುತ ಚಮತ್ಕಾರವನ್ನೇ ಮಾಡುತ್ತದೆ.

ಹಾಗಲಕಾಯಿ ರಸವು ಮಧುಮೇಹಕ್ಕೆ ಅತ್ಯುತ್ತಮ ನೈಸರ್ಗಿಕ ಮತ್ತು ಆಯುರ್ವೇದಿಕ ಔಷಧವಾಗಿದೆ. ಮತ್ತು ಇದರ ತಾಜಾ ರಸವನ್ನು ಬೆಳಿಗ್ಗೆ ಬೇಗನೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ನಮ್ಮ ದೇಹದ ಎಲ್ಲಾ ನರನಾಡಿಗಳಲ್ಲಿ ಸಂಚರಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಇದ್ದಕ್ಕಿದಂತೆ ತೂಕ ಹೆಚ್ಚಾಗುವ, ಅಧಿಕ ರಕ್ತದ ಒತ್ತಡದಿಂದ ಬಳಲುವ, ಹೃದ್ರೋಗ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಮಧುಮೇಹ ಸಂಬಂಧಿತ ಆರೋಗ್ಯ ಸಮಸ್ಯೆಗಳ ಸಾಧ್ಯತೆ ಉಂಟಾಗುವುದನ್ನು ಕಡಿಮೆ ಮಾಡುತ್ತದೆ.

ರಕ್ತದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಲು ಕ್ಯಾನ್ಸರ್ ಗೆ ತುತ್ತಾಗಿ ಬಾಡಲಿಯ ಕಾರ್ಯಕ್ಷಮತೆ ಕುಸಿಯುವುದು ಪ್ರಮುಖ ಕಾರಣವಾಗಿದೆ. ಹಾಗಲಕಾಯಿಯಲ್ಲಿರುವ ಪೋಷಕಾಂಶಗಳು ಈ ಕ್ಯಾನ್ಸರ್ ಗೆ ಕಾರಣವಾದ ಅಪಾಯಕಾರಿ ಜೀವಕೋಶಗಳನ್ನು ಬೆಳೆಯದಂತೆ ತಡೆಯುತ್ತದೆ. ಪರಿಣಾಮವಾಗಿ ಬಾಡಲಿ ಸುಕ್ಷಮವಾಗಿ ಕಾರ್ಯನಿರ್ವಹಿಸಿ ರಕ್ತಕ್ಕೆ ಅಗತ್ಯವಾದ ಪ್ರಮಾಣದಲ್ಲಿ ಇನ್ಸುಲಿನ್ ಅನ್ನು ಉತ್ಪಾದಿಸಿಕೊಡಲು ಸಾಧ್ಯವಾಗುತ್ತದೆ.

ಪ್ರತಿದಿನ ಬೆಳಿಗ್ಗೆ ಒಂದು ಲೋಟ ಹಾಗಲಕಾಯಿಯ ರಸವನ್ನು ಖಾಲಿಹೊಟ್ಟೆಯಲ್ಲಿ ಕುಡಿದರೆ ರಕ್ತದಲ್ಲಿ ಹೆಚ್ಚಾಗಿರುವ ಸಕ್ಕರೆಯ ಅಂಶ ಮೂರೇ ದಿನದಲ್ಲಿ ತಹಬಂದಿಗೆ ಬರುತ್ತದೆ.   ಇದು ರಕ್ತದಲ್ಲಿನ ಸಕ್ಕರೆ ಉಪಯೋಗಿಸಲ್ಪಡದೇ ವಿಸರ್ಜಿಸಲಾಗಲು ಇನ್ಸುಲಿನ್ ಪ್ರಮಾಣ ಮಹತ್ವದ ಪಾತ್ರ ವಹಿಸುತ್ತದೆ. ಈ ಪೋಷಕಾಂಶಗಳು ಇನ್ಸುಲಿನ್ ಕೊರತೆಯಾಗದಂತೆ ನೋಡಿಕೊಳ್ಳುವುದೇ ಹಾಗಲಕಾಯಿಯ ಈ ಸಾಮರ್ಥ್ಯಕ್ಕೆ ಕಾರಣವಾಗಿದೆ.

ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ   ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ ಅತ್ಯಂತ ಪರಿಣಾಮಕಾರಿಯಾಗಿದೆ. ಈ ರಸ ಹೊಟ್ಟೆಯಲ್ಲಿಳಿದ ಬಳಿಕ ಜೀರ್ಣರಸಗಳನ್ನು ಅಗತ್ಯಪ್ರಮಾಣದಲ್ಲಿ ಸ್ರವಿಸಲು ಜಠರಕ್ಕೆ ಪ್ರಚೋದನೆ ನೀಡುತ್ತದೆ. ಪರಿಣಾಮವಾಗಿ ಹುಳಿತೇಗು, ಗ್ಯಾಸ್ಟ್ರಿಕ್, ಹೊಟ್ಟೆಯ ಹುಣ್ಣು ಮೊದಲಾದ ತೊಂದರೆಗಳಿಂದ ಕಾಪಾಡಿದಂತಾಗುತ್ತದೆ. ವಾರಕ್ಕೊಮ್ಮೆ ಬೆಳಿಗ್ಗೆದ್ದ ಕೂಡಲೇ ಖಾಲಿಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಆರೋಗ್ಯ ಉತ್ತಮಗೊಳ್ಳುತ್ತದೆ.

 

Font Awesome Icons

Leave a Reply

Your email address will not be published. Required fields are marked *