ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

ಬೆಂಗಳೂರು: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಬನ್ನೇರುಘಟ್ಟ ರಸ್ತೆಯ ಸಕಲವಾರ ಸಮೀಪ ನಡೆದಿದೆ.

ಪ್ರತಾಪ್(26) ಸಾವನ್ನಪ್ಪಿದ ಬೈಕ್ ಸವಾರ, ಸ್ನೇಹಿತನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹ‌ನ ಹಿಂಬದಿಯಿಂದ ಬೈಕ್​ಗೆ ಡಿಕ್ಕಿ ಹೊಡೆದಿದೆ. ಹಿಟ್ ಅಂಡ್ ರನ್ ಅಪಘಾತಕ್ಕೆ ಬೈಕ್ ಸವಾರ ಪ್ರತಾಪ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Font Awesome Icons

Leave a Reply

Your email address will not be published. Required fields are marked *