ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್‌

ಹುಬ್ಬಳ್ಳಿ: ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ. 1)ರಂದು ಆಗಮಿಸಿದ್ದಾರೆ.

ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು.

ಅವರು ಇಂದು ಸಂಜೆ ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ, ಎಂ.ಎಂ.ಜೋಶಿ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಐ ಕೇರ್ ಆಸ್ಪತ್ರೆ ‘ಐಸಿರಿ’ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ಲಭಿಸಿದೆ.

Font Awesome Icons

Leave a Reply

Your email address will not be published. Required fields are marked *