1,001 ಸಹಾಯಕ ಪ್ರಾಧ್ಯಾಪಕರ ನೇಮಕ: ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ » Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್


ಬೆಂಗಳೂರು,ಸೆಪ್ಟಂಬರ್,10,2024 (www.justkannada.in): ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 1001 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ರಾಜ್ಯ ಸರ್ಕಾರ ನೀಡಿದೆ.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,001 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಕಾಲೇಜು ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇರ ನೇಮಕಾತಿಗೆ ಆಯ್ಕೆ ಪ್ರಾಧಿಕಾರವಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸರ್ಕಾರಕ್ಕೆ ಸಲ್ಲಿಸಿದ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 92 ಡಿಸಿಇ 2023 (ಇ), ದಿನಾಂಕ:03.11.2023 ರಲ್ಲಿ ಪ್ರಕಟಿಸಿದೆ.

2021ರಲ್ಲಿ ನೇಮಕಾತಿಯು ಕೆಇಎ ಮೂಲಕ ಅಧಿಸೂಚನೆಯಾಗಿದ್ದು, ಅಂತಿಮ ಆಯ್ಕೆ ಪಟ್ಟಿಯನ್ನು 2023ರ ನವೆಂಬರ್ 4ರಂದು ವಿಶೇಷ ರಾಜ್ಯ ಪತ್ರದಲ್ಲಿ ಪ್ರಕಟವಾಗಿದ್ದರೂ ಕೂಡ ಇದುವರೆಗೂ ಸ್ಥಳನಿಯುಕ್ತಿ ಆದೇಶ ಪತ್ರ ನೀಡಿರಲಿಲ್ಲ.

ಇದೀಗ ಎರಡು ವರ್ಷಗಳ ನಂತರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಆಯ್ಕೆಗೊಂಡ ಅಭ್ಯರ್ಥಿಗಳ ವೇತನ ಶ್ರೇಣಿ ರೂ.57,700- 1,82,400 (ಯುಜಿಸಿ ವೇತನ ಶ್ರೇಣಿ) ನಿಗದಿ ಮಾಡಿ ಸರ್ಕಾರ ಆದೇಶಿಸಿದೆ.

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಸಹಾಯಕ ಪ್ರಾಧ್ಯಾಪಕರ ನೇಮಕಾತಿ) (ವಿಶೇಷ) ನಿಯಮಗಳು, 2020 ನಿಯಮ 9 ರ ಉಪನಿಯಮ (2) ಮತ್ತು (3) ರನ್ನಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಅರ್ಹತೆಯ ದೃಢೀಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ವಿಚಾರಣೆಗಳು ಪೂರ್ಣಗೊಂಡಿರುವ ಅಭ್ಯರ್ಥಿಗಳನ್ನು ವೇತನ ಶ್ರೇಣಿ ರೂ.57700- 182400 (ಯುಜಿಸಿ ವೇತನ ಶ್ರೇಣಿ) ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Key words: 1,001 Assistant Professors,  Appointment, order, selected candidates

Font Awesome Icons

Leave a Reply

Your email address will not be published. Required fields are marked *