11 ವರ್ಷದ ಬಾಲಕಿಯ ಶಿರಚ್ಛೇದ ಮಾಡಿದ ಸಂಬಂಧಿ: ಆರೋಪಿಯ ಬಂಧನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಸಂಬಂಧಿಯೊಬ್ಬ 11 ವರ್ಷದ ಬಾಲಕಿಯ ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ.

ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಹಿಂದೆ ಹಲವು ಬಾರಿ ಆಕೆಯ ತಂದೆ ತಂದೆ ಸಾರ್ವಜನಿಕವಾಗಿ ಅವಮಾನಿಸಿ ಥಳಿಸಿದ್ದರಿಂದ ಬಾಲಕಿಯನ್ನು ಕೊಂದಿರುವುದಾಗಿ ವ್ಯಕ್ತಿ ಪೊಲೀಸರಿಗೆ ತಿಳಿಸಿದ್ದಾನೆ.

ಆರೋಪಿ ಬಾಲಕಿಯ ಶಿರಚ್ಛೇದ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರವೆಸಗಿದ್ದರೇ ಎಂಬ ಬಗ್ಗೆ ಪೊಲೀಸರು ಈಗ ತನಿಖೆ ನಡೆಸುತ್ತಿದ್ದಾರೆ. ಜನವರಿ 29 ರಿಂದ ನಾಪತ್ತೆಯಾಗಿದ್ದ ಬಾಲಕಿಯ ದೇಹದ ವಿವಿಧ ಭಾಗಗಳು ಮಾಲ್ಡಾದ ಬೇರೆ ಬೇರೆ ಸ್ಥಳಗಳಲ್ಲಿ ಪತ್ತೆಯಾಗಿದೆ.

ಆರೋಪಿ ಮೊದಲಿಗೆ ಪೊಲೀಸರನ್ನು ದಾರಿತಪ್ಪಿಸಲು ಪ್ರಯತ್ನಿಸಿದ. ಆದರೆ ನಂತರ ಆಕೆಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ವ್ಯಕ್ತಿಯನ್ನು ಬಂಧಿಸಿ 12 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿ ಬಿಜೆಪಿ, ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೂಡ ಪ್ರತಿಭಟನಾ ರ‍್ಯಾಲಿಗಳು ಮತ್ತು ಮೌನ ಜಾಗರಣೆ ನಡೆಸಿದ್ದವು.

Font Awesome Icons

Leave a Reply

Your email address will not be published. Required fields are marked *