12 ಮಂದಿ ಸೆರೆ – News Karnataka Kannada (ನ್ಯೂಸ್ ಕರ್ನಾಟಕ ಕನ್ನಡ)

ಚೆನ್ನೈ:  ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಬ್ಲಾಕ್​ ಟಿಕೆಟ್​ ಮಾರಾಟಕ್ಕೆ ಬ್ರೇಕ್‌ ಹಾಕಿದ ತಮಿಳುನಾಡು ಪೊಲೀಸರು 12 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳವಾರ ನಡೆದ ಚೆನ್ನೈ ಮತ್ತು ಲಕ್ನೋನಡುವಿನ ಪಂದ್ಯದ ಟಿಕೆಟ್​​ಗಳನ್ನು ದುಬಾರಿ ಬೆಲೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ವೇಳೆ ಇವರನ್ನು ಬಂಧಿಸಲಾಗಿದೆ. ಬಂಧಿತರಿಂದ 1,40,396 ರೂಪಾಯಿ ಮೌಲ್ಯದ 56 ಟಿಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ 12 ಮಂದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Font Awesome Icons

Leave a Reply

Your email address will not be published. Required fields are marked *