ಉಡುಪಿ: ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಥಲೀಕೃತ ಶವಗಾರ ಕಟ್ಟಡ ನಿರ್ಮಾಣಕ್ಕೆ ಖನಿಜ ಪ್ರತಿಷ್ಠಾನ ನಿಧಿಯಿಂದ 18.5 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಸ್ಥಳೀಯ ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರೋಷನಿ ಪೂಂಜ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.